ಮಂಗಳೂರು, ಜು 04 (DaijiworldNews/MS): ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ , ಕಾವೂರು ನಿವಾಸಿ ಚೇತನ್ ಕುಮಾರ್ (28) ಅವರ ಮೃತದೇಹ ಇಂದು ಪತ್ತೆಯಾಗಿದೆ.
ಚೇತನ್ 2 ದಿನಗಳ ಹಿಂದೆ ನಾಪತ್ತೆಯಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಕೂಳೂರು ಸೇತುವೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಇದು ಚೇತನ್ ಮೃತದೇಹ ಎಂದು ಗುರುತಿಸಲಾಗಿದೆ.
ಮೃತರು ಮೂವರು ಸಹೋದರರು ಹಾಗೂ ತಾಯಿಯನ್ನು ಅಗಲಿದ್ದಾರೆ.