ಕಾಸರಗೋಡು, ಜು 04 (DaijiworldNews/MS): ಜಿಲ್ಲೆಯ ಕೆಲ ಸ್ಥಳಗಳಲ್ಲಿ ಎಚ್1ಎನ್1 ಸೋಂಕು ದೃಢ ಪಟ್ಟಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ರು ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿ ಡಾ. ರಾಮ್ ದಾಸ್ ತಿಳಿಸಿದ್ದಾರೆ.
ಇನ್ಫ್ಲುಯೆನ್ಸ A ಗುಂಪಿನ ವೈರಸ್ ಇದಾಗಿದ್ದು, ಹಂದಿಗಳಲ್ಲಿ ಈ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಹಂದಿ ಸಾಕಾಣಿಕೆ ಹೊಂದಿರುವವರು ಈ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಈ ಸೋಂಕು ಒಬ್ಬರಿಂದ ಒಬ್ಬರಿಗೆ ಬೇಗನೆ ಹರಡುತ್ತಿದ್ದು, ಇದರಿಂದ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ .