ನೈನಿತಾಲ್, ಜ19(SS): ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಎಂದು ಕಾಂಗ್ರೆಸ್ ನಾಯಕ ಹಾಗೂ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ.
ಬಿಜೆಪಿ ಮಿತಿ ಮೀರಿ ವರ್ತಿಸುತ್ತಿದೆ. ಯಾರು ಕಾನೂನನ್ನು ಮುರಿಯುತ್ತಾರೋ ಅವರು ಮರ್ಯಾದಾ ಪುರುಷೋತ್ತಮ ರಾಮನ ಭಕ್ತನಾಗಲು ಸಾಧ್ಯವಿಲ್ಲ. ನಾವು ಕಾನೂನಿಗೆ ಗೌರವ ನೀಡುತ್ತೇವೆ. ಕಾಂಗ್ರೆಸ್ ಅಧಿಕಾರ ಬಂದಮೇಲೆ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
2025ರ ಒಳಗೆ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ಆರ್ಎಸ್ಎಸ್ನ ಎರಡನೇ ಮುಖ್ಯಸ್ಥ ಭಯ್ಯಾಜಿ ಜೋಶಿ ಶುಕ್ರವಾರ ಹೇಳಿಕೊಂಡಿದ್ದರು. ಅಲ್ಲದೆ, ಈ ಕ್ರಮದಿಂದ ದೇಶಕ್ಕೆ ಮುಂದಿನ 150 ವರ್ಷ ಒಳ್ಳೆಯದಾಗುತ್ತದೆ ಎಂದು ಹೇಳಿಕೊಂಡಿದ್ದರು. "1952ರಲ್ಲಿ ಸೋಮನಾಥ ದೇವಾಲಯ ನಿರ್ಮಾಣ ಮಾಡಲಾಯಿತು. ಅದಾದ ನಂತರ ದೇಶ ಅಭಿವೃದ್ಧಿ ವೇಗ ಪಡೆದುಕೊಂಡಿತ್ತು. 2025ರಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ನಂತರ ದೇಶಕ್ಕೆ ಒಳಿತಾಗಲಿದೆ. ನಂತರ 150 ವರ್ಷಗಳ ಕಾಲ ದೇಶಕ್ಕೆ ಯಾವುದೇ ಕೇಡು ಎದುರಾಗದು ಎಂದು ಹೇಳಿಕೆ ನೀಡಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹರೀಶ್ ರಾವತ್ ಈ ಹೇಳಿಕೆ ನೀಡಿದ್ದಾರೆ.