ಕಾಸರಗೋಡು, ಜು 04 (DaijiworldNews/SM): ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳು ಪ್ರದೇಶಗಳು ಜಲಾವೃತಗೊಂಡಿವೆ. ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ಹಾವಳಿ ಉಂಟಾಗಿದೆ. ಇದರಿಂದ ತೀರದ ಹಲವಾರು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಸತತವಾಗಿ ಸುರಿಯುತ್ತಿರುವ ಮಳೆಗೆ ಅಪಾರ ನಾಶನಷ್ಟ ಉಂಟಾಗಿದೆ. ರಾಷ್ಟೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ನ ನೆಲ್ಲಿಕಟ್ಟೆಯಲ್ಲಿ ಮನೆ ಸುತ್ತಲೂ ನೀರು ತುಂಬಿದ್ದರಿಂದ ಸಿಲುಕಿದ್ದ ವೃದ್ಧೆಯರಾದ ಶ್ರೀಮತಿ ಹಾಗೂ ಸೌಜಿತ್ ರನ್ನು ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ಮಳೆ ಹಿನ್ನಲೆಯಲ್ಲಿ ಅಗತ್ಯ ಕ್ರಮ ತೆಗೆದು ಕೊಳ್ಳುವಂತೆ ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.