ಮಂಗಳೂರು, ಜು 05(DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಮಂಗಳವಾರ (ಜುಲೈ5 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
"ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.5ರ ಮಂಗಳವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಡಿಪ್ಲೋಮ/ಐಟಿಐ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ" - ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ