ಬಂಟ್ವಾಳ, ಜು 07 (DaijiworldNews/MS): ಕಾರ್ಮಿಕ ರು ಉಳಿದುಕೊಂಡ ಶೆಡ್ ಗೆ ಕುಸಿದ ಗುಡ್ಡ, ಶೆಡ್ ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು , ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದ.
ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಬ್ಬರು ಚಿಕಿಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪಾಲಕ್ಕಾಡು ನಿವಾಸಿ ವಿಜು (46)ಉಳಿದಂತೆ ಕೊಟ್ಟಾಂ ನಿವಾಸಿ ಬಾಬು (46) ಎಂಬವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅಲ್ಫೊನ್ಸಾ ಮೃತಪಟ್ಟ ದುರ್ದೈವಿಗಳು.
ಕಣ್ಣೂರು ನಿವಾಸಿ ಜಾನ್ (44)ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಡಿ.ಸಿ.ಎಸ್.ಪಿ.ಸಹಿತ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ! ಕೆ.ವಿ.ರಾಜೇಂದ್ರ, ಎಸ್.ಪಿ.ಹೃಷಿಕೇಶ್ ಸೋನಾವಣೆ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ,ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂದ, ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ಕುಮಾರ್, ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯರಾದ ಮೋಹನ್ ದಾಸ್ , ಬಾಲಕೃಷ್ಣ ಪೂಜಾರಿ, ಸ್ಥಳೀಯ ಪ್ರಮುಖರಾದ ಸುದರ್ಶನ್, ಪಿಯೂಸ್ ಎಲ್.ರೋಡ್ರಿಗಸ್, ಬೇಬಿಕುಂದರ್, ಸುರೇಶ್ ಜೋರಾ ಮತ್ತಿತರರು ಬೇಟಿ ರಕ್ಷಣಾ ಕಾರ್ಯಚರಣೆಗೆ ಸಹಕರಿಸಿದರು.ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.