ಬಜ್ಪೆ, ಜು 07 (DaijiworldNews/HR): ಮಂಗಳೂರು ಏರ್ಪೋರ್ಟ್ನ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಕೊಚ್ಚಿ ಹೋಗಿದ್ದು, ಅದ್ಯಪಾಡಿ ಬಳಿ ಇರುವ ರನ್ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಆಗಿದೆ.
ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆ ಇದಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಈ ಕುರಿತು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು, ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸುತ್ತುವರಿದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು ವಿಮಾನದ ರನ್ ವೇಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ನಿಲ್ದಾಣದಲ್ಲಿ ಚಟುವಟಿಕೆಗಳು ದೈನಂದಿನಂತೆ ನಡೆಯುತ್ತಿದ್ದು,ರಸ್ತೆ ದುರಸ್ತಿಯ ಕಾರ್ಯಾಚರಣೆ ನಡೆಯುತ್ತಿದೆ ಸಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿ ಭಯವನ್ನು ಸೃಷ್ಟಿಸಬೇಡಿ ಎಂದು ಹೇಳಿದೆ.