ಕಾಸರಗೋಡು, ಜು 08(DaijiworldNews/SM): ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ(ಜುಲೈ 8) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜುಲೈ 8ರ ಶುಕ್ರವಾರ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಕೇಂದ್ರೀಯ ವಿದ್ಯಾಲಯ, ಮದ್ರಸ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ಹೊರಡಿಸಿದ್ದಾರೆ.