ಬಂಟ್ವಾಳ, ಜು 09 (DaijiworldNews/HR): ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, 7.4 ಮಿ.ಎತ್ತರದಲ್ಲಿ ಹರಿಯುತ್ತಿದೆ.
ಅಪಾಯ ಮಟ್ಟ 8.5 ಆಗಿದ್ದು, ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿತ್ತು. 6.3 ಮಿ.ಎತ್ತರದಲ್ಲಿ ಹರಿಯುತ್ತಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ನೇತ್ರಾವತಿ ನದಿ ತುಂಬಿ ಹರಿಯಲು ಪ್ರಾರಂಭಿಸಿದೆ.
ಇನ್ನು ಬಾರಿ ವೇಗವಾಗಿ ನೀರು ಹರಿಯುತ್ತಿದ್ದು ರಾತ್ರಿ ವೇಳೆನೀರಿನ ಮಟ್ಟದಲ್ಲಿ ಇನ್ನಷ್ಟು ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಲಾಗುತ್ತಿದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಉಪ್ಪಿನಂಗಡಿಯಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ.