ವಿಟ್ಲ, ಜು 11(DaijiworldNews/MS): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದು ರಸ್ತೆಯಲ್ಲಿ ಮಣ್ಣು ತುಂಬಿಕೊಂಡ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಜು.11ರ ಸೋಮವಾರ ನಡೆದಿದೆ.
ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ.
ಘಟನೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸುತ್ತಿದ್ದು, ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದೆ.