ಬಂಟ್ವಾಳ, ಜು 11 (DaijiworldNews/HR): ಕಳೆದ ಸುಮಾರು ಹನ್ನೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನ ಅಲ್ಲಲ್ಲಿ ಪ್ರಾಕೃತಿಕ ವಿಕೋಪದಿಂದ ತೊಂದರೆಗಳು ಉದ್ಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಗುಡ್ಡ ಕುಸಿತ, ಮನೆಗಳು ಹಾನಿಯಾಗಿರುವ ಗ್ರಾಮಗಳಾದ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮುಡೂರು, ಪಂಜಿಕಲ್ಲು ಗ್ರಾಮಗಳು ಹಾಗೂ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.
ಈ ಸಂದರ್ಭ ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ಕರೆ ಮಾಡಿದ ಅವರು ಸೂಕ್ತ ಪರಿಹಾರ ಹಾಗೂ ಸುರಕ್ಷತೆಗೆ ಗರಿಷ್ಠ ಒತ್ತು ನೀಡಲು ಒತ್ತಾಯಿಸಿದರು.
ಮಾಜಿ ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿಕುಂದರ್ ಮೊದಲಾದವರು ಉಪಸ್ಥಿತರಿದ್ದರು.