ಮಂಗಳೂರು, ಜು 12 (DaijiworldNews/MS): ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಅಬ್ಬರಿಸುತ್ತಿದ್ದ ಮಳೆ ಪ್ರಮಾಣದಲ್ಲಿ ಭಾರೀ ಇಳಿಮುಖವಾಗಿದೆ. ಸೋಮವಾರ ಹಾಗೂ ಮಂಗಳವಾರ ಬೆಳಗ್ಗೆಯವರೆಗೆ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು ಕರಾವಳಿಯ ಜನ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
ಕರಾವಳಿಯಲ್ಲಿ ಈ ಹಿಂದೆ ಘೋಷಿಸಲಾಗಿದ್ದ ರೆಡ್ ಅಲರ್ಟ್ ಮಂಗಳವಾರದಿಂದ ಆರೆಂಜ್ ಅಲರ್ಟ್ ಆಗಿ ಪರಿವರ್ತನೆಗೊಂಡಿವೆ. ಆರೆಂಜ್ ಅಲರ್ಟ್ ಶನಿವಾರ ಮುಂಜಾನೆವರೆಗೂ ಮುಂದುವರಿಯಲಿದೆ. ಹಾಗಾಗಿ ಮಳೆ ಒಂದಷ್ಟು ತಗ್ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
ದ.ಕ ಜಿಲ್ಲೆಯ ಮಂಗಳೂರು, ಸುಳ್ಯ, ಬೆಳ್ತಂಗಡಿ , ಕಡಬ ಭಾಗದಲ್ಲಿ ಸೋಮವಾರ ಮಳೆ ಕಡಿಮೆಯಾಗಿದ್ದು ನದಿಯ ನೀರಿನ ಹರಿವಿನ ಮಟ್ಟವೂ ಕೊಂಚ ಕಡಿಮೆಯಾಗಿದೆ .