ಮಂಗಳೂರು, ಜು 18 (DaijiworldNews/MS): ವಿದೇಶದಿಂದ ಮಂಗಳೂರಿಗೆ ಆಗಮಿಸಿದ ಕೇರಳದ ಪ್ರಯಾಣಿಕನೋರ್ವನನ್ನು ಮಂಕಿಪಾಕ್ಸ್ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಸಂಪರ್ಕಕ್ಕೆ ಬಂದ 35 ಮಂದಿಯನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮಾತ್ರವಲ್ಲದೆ ಯುವಕನನ್ನು ಐಸೋಲೇಶನ್ಗೆ ಒಳಪಡಿಸಲಾಗಿದ್ದು ನಿಗಾ ಇರಿಸಲಾಗಿದೆ. ಕೇರಳದಲ್ಲಿ ಮೊದಲ ಮಂಕಿಫಾಕ್ಸ್ ಪ್ರಕರಣ ಜು.12 ರಂದು ದಾಖಲಾಗಿತ್ತು.
ಇನ್ನು ಮಂಗಳೂರಿಗೆ ಆಗಮಿಸಿದ ಕೇರಳದ ವ್ಯಕ್ತಿಯ ಸಂಪರ್ಕಕ್ಕೆ ಬಂದಿರುವ ಸಹ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಐಸೋಲೇಷನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ.
ಇನ್ನು ಈ ನಡುವೆ ಜಿಲ್ಲಾಡಳಿತ ವಿಮಾನ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣಗಳಲ್ಲಿ ನಿಗಾ ವಹಿಸಲಾಗಿದೆ.