ಮಂಗಳೂರು, ಜು 20 (DaijiworldNews/HR): ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ವಿರುದ್ಧ ಕಂಬಳ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಮುಚ್ಚೂರು ಎಂಬವರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಹಿರಿಯ ತೀರ್ಪುಗಾರ ಗುಣಪಾಲ್ ಕಡಂಬ ಮತ್ತು ಲೇಸರ್ ಬೀಮ್ ಮಾಲಕ ರತ್ನಾಕರ್ ಎಂಬವರು ಕಂಬಳದ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರದ ಹಣ ವಂಚನೆ ಮಾಡಿದ್ದಾರೆ ಎಂದು ಲೋಕೇಶ್ ಶೆಟ್ಟಿ ಆರೋಪ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಸಮಿತಿ ಹೆಸರಲ್ಲಿ ಹಣ ಪಡೆದು ಲಕ್ಷಾಂತರ ರೂ. ಹಣಕ್ಕೆ ಲೆಕ್ಕಪತ್ರ ಕೊಟ್ಟಿಲ್ಲ ಎಂದು ಮೂವರ ವಿರುದ್ದ ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ಎಂಬವರು ಮೂಡಬಿದ್ರೆ ಠಾಣೆಗೆ ದೂರು ನೀಡಿದ್ದು, ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸೂಚಿಸಿದ್ದೇನೆ. ಮೂಡಬಿದ್ರೆ ಇನ್ಸ್ಪೆಕ್ಟರ್ ಈ ಬಗ್ಗೆ ವಿಚಾರಣೆ ನಡೆಸಿ ಸತ್ಯಾಸತ್ಯತೆ ತನಿಖೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.