ಬೆಳ್ಳಾರೆ, ಜು 20 (DaijiworldNews/HR): ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ಎಂಟು ಮಂದಿಯ ತಂಡವೊಂದು ಕ್ಷುಲ್ಲಕ ವಿಚಾರಕ್ಕೆ ಯುವಕನೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆಗೈರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಕಳೆಂಜ ನಿವಾಸಿ ಮಸೂದ್(21) ಹಲ್ಲೆಗೊಳಗಾದ ಯುವಕನಾಗಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಂಟು ಮಂದಿ ಆರೋಪಿಗಳನ್ನು ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಮಸೂದ್ ಮತ್ತು ಸ್ಥಳೀಯ ಯುವಕನೋರ್ವನ ಮಧ್ಯೆ ಗಲಾಟೆ ನಡೆದಿದ್ದು, ಇದೇ ವಿಚಾರವಾಗಿ ಬಳಿಕ ರಾಜಿ ಪಂಚಾಯಿತಿಕೆಗೆಂದು ಮಸೂದ್ ನನ್ನು ಕರೆಸಿದ ಎಂಟು ಮಂದಿಯ ತಂಡ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.