ಬೈಂದೂರು, ಜು 20 (DaijiworldNews/HR): ಅತಿವೇಗದಿಂದ ಚಲಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಶಿರೂರಿನ ಟೋಲ್ ಗೇಟ್ನ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.
ಹೊನ್ನಾವರದಿಂದ ಕುಂದಾಪುರ ಆಸ್ಪತ್ರೆಗೆ ರೋಗಿಯನ್ನು ಕರೆತರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಶಿರೂರಿನ ಟೋಲ್ ಗೇಟ್ನ ಕಂಬಕ್ಕೆ ಢಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.