ಮಂಗಳೂರು,ಜ 25(MSP): ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2018 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದಕ್ಕಾಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅತ್ಯುತ್ತಮ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಂಬ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಈಗಿನ ಜವಳಿ ಅಭಿವೃದ್ಧಿ ಇಲಾಖೆ ಆಯುಕ್ತರಾಗಿರುವ ಡಾ.ಎಂ.ಆರ್. ರವಿ ಅವರಿಗೂ ಈ ಪ್ರಶಸ್ತಿ ದೊರೆತಿದೆ.
ಇದೇ 25 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರು ವಜೂಬಾಯಿ ರೂಡಾಬಾಯಿ ವಾಲಾ ಡಾ. ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.