ಮಂಗಳೂರು, ಜು 22 (DaijiworldNews/MS): ಕೇರಳದಲ್ಲಿ ಮಂಕಿಫಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲೆಯಲ್ಲೂ ವಿಶೇಷ ನಿಗಾ ಇರಿಸಲಾಗಿದೆ.
ಜಿಲ್ಲೆಯ ಕಾಲೇಜುಗಳಿಗೆ ಆಗಮಿಸಿದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಲ್ಲಿ ಮಂಕಿಫಾಕ್ಸ್ ರೋಗ ಲಕ್ಷಣ ಕಂಡುಬಂದರೆ ತತ್ ಕ್ಷಣ ಮಾಹಿತಿ ನೀಡಬೇಕು ಎಂಬ ಸೂಚನೆಯನ್ನು ಆರೋಗ್ಯ ಇಲಾಖೆ ನೀಡಿದೆ.
ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬರು ದುಬೈನಿಂದ ಕೇರಳದ ಕಣ್ಣೂರಿಗೆ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿದ್ದರು. ಈ ವೇಳೆ ಅವರಲ್ಲಿ ಮಂಕಿಫಾಕ್ಸ್ ಲಕ್ಷಣಗಳು ಕಂಡುಬಂದಿದ್ದವು. ಹೀಗಾಗಿ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಬಳಿಕ ಮಂಕಿಫಾಕ್ಸ್ ಸೋಂಕು ಇರುವುದು ದೃಢಪಟ್ಟಿದ್ದು ಕೇರಳದಲ್ಲಿ ಇದು ಎರಡನೇ ಪ್ರಕರಣವಾಗಿದೆ.