ಮಂಗಳೂರು/ಉಡುಪಿ, ಜು22 (DaijiworldNews/MS): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಜುಲೈ 22 ರಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದವು.
ಉಡುಪಿ
ಈ ವೇಳೆ ಮಾಜಿ ಸಚಿವ ರಮಾನಾಥ್ ರೈ ಮಾತನಾಡಿ, ''ಕೇಂದ್ರ ಸರಕಾರ ಪ್ರತಿಪಕ್ಷಗಳ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿದ್ದು ಇದು ರಾಜಕೀಯ ಸೇಡಿನ ಕ್ರಮವಾಗಿದೆ" ಎಂದು ಆರೋಪಿಸಿದರು.
ವಿರೋಧ ಪಕ್ಷಗಳ ನಾಯಕರಿಗೆ ಬಿಜೆಪಿ ಇಡಿ, ಐಟಿ ಮತ್ತು ಸಿಬಿಐ ಮೂಲಕ ಕಿರುಕುಳ ನೀಡಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ಬಳಿಕ ಕಾಂಗ್ರೆಸ್ ಮುಖಂಡರು ಕ್ಲಾಕ್ ಟವರ್ ಬಳಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಪ್ರತಿಭಟನಾಕಾರರನ್ನು ಟೌನ್ ಹಾಲ್ ಬಳಿ ತಡೆ ಯತ್ನಲು ಯತ್ನಿಸಿದರು. ಈ ವೇಳೆ ಬ್ಯಾರಿಕೇಡ್ ಹಾರಲು ಯತ್ನಿಸಿದ ಪ್ರತಿಭಟನಕಾರರನ್ನು ಬಂಧಿಸಿದರು.
ಇದೇ ವೇಳೆ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಉಡುಪಿ ಕಾಂಗ್ರೆಸ್ ಘಟಕ ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆಯನ್ನೂ ನಡೆಸಿತ್ತು.
ಕಾಂಗ್ರೆಸ್ ಮುಖಂಡರಾದ ಶಾಸಕ ಯು ಟಿ ಖಾದರ್, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಎಂ ಎ ಗಫೂರ್, ಸೌರಭ್ ಬಲ್ಲಾಳ್, ರಮೇಶ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಡುಪಿ, ವೆರೋನಿಕಾ ಕರ್ನೇಲಿಯೋ, ದಿನಕರ ಹೇರೂರು, ಬಿಪಿನ್ ಚಂದ್ರ ಪಾಲ್, ಪ್ರಖ್ಯಾತ್ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು
ಕಾಂಗ್ರೆಸ್ ಕಾರ್ಯಕರ್ತರು ವಾಹನಗಳನ್ನು ತಡೆದು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಲಗಿ ಕೆಲಕಾಲ ವಾಹನಗಳನ್ನು ತಡೆದರು. ಬಳಿಕ ಪೊಲೀಸರು ಪ್ರತಿಭಟನಕಾರರನ್ನು ಚದುರಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.