ಮಂಗಳೂರು, ಜು 22 (DaijiworldNews/HR): ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಆಗಸ್ಟ್1ಕ್ಕೆ ತೀರ್ಪು ಕಾಯ್ದಿರಿಸಿದೆ.
ಸ್ಥಳೀಯರಾದ ಮನೋಜ್ ಕುಮಾರ್ ಧನಂಜಯ ಹಾಗೂ ಮತ್ತಿತರರು ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದ್ದ ಪ್ರತಿಯನ್ನು ಮಸೀದಿ ಪರ ವಕೀಲರು ಇಂದು ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆದೇಶ ಪ್ರತಿಯನ್ನು ಸ್ವೀಕರಿಸಿದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿದೆ.
ಇನ್ನು ವಿವಾದಕ್ಕೆ ಸಂಬಂಧಿಸಿದಂತೆ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ವಾದವಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಈ ವೇಳೆ ಸ್ಥಳೀಯರಾದ ಧನಂಜಯ ಮತ್ತು ಮನೋಜ್ ಕುಮಾರ್ ಮತ್ತಿತರರು ಸಿವಿಲ್ ನ್ಯಾಯಾಲಯ ತೀರ್ಪು ನೀಡುವುದನ್ನು ತಡೆಹಿಡಿಯಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.