ಕುಂದಾಪುರ, ಜು 23 (DaijiworldNews/HR): ಖಾಸಗಿ ಶಾಲೆಯ ಶಿಕ್ಷಕರೋರ್ವರು ಅಡುಗೆಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಸಮೀಪದ ಅಂಕದಕಟ್ಟೆಯಲ್ಲಿ ನಡೆದಿದೆ.
ಮಂಗಳೂರು ನೆಲ್ಯಾಡಿ ನಿವಾಸಿ ಆನಂದ ಗೌಡ (33ವ) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಖಾಸಗಿ ಶಾಲೆಯೊಂದರ ಗಣಿತ ಶಿಕ್ಷಕರಾಗಿರುವ ಆನಂದ ಗೌಡ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಹೆಂಡತಿಯೊಡನೆ ಅಂಕದಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,
ಇತ್ತೀಚೆಗಷ್ಟೇ ಅವರು ಹೊಸದಾಗಿ ಕಾರು ಖರೀದಿಸಿದ್ದರು. ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಪತ್ನಿ ಅಡುಗೆ ಮನೆಗೆ ಬಂದು ನೋಡಿದಾಗ ಅಡುಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821