ಹೊಸದಿಲ್ಲಿ, ಜ 25(SM): ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕಾರಕ್ಕೆ ಮೂವರು ದಿಗ್ಗಜ ಸಾಧಕರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಮರಣೋತ್ತರವಾಗಿ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶ್ಮುಖ್ ಮತ್ತು ಸಂಗೀತ ಮಾಂತ್ರಿಕ ಭೂಪೇನ್ ಹಝಾರಿಕಾ ಅವರಿಗೆ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಲಾಗಿದೆ. ರಾಷ್ಟ್ರಪತಿ ಭವನ ಮೂವರ ಹೆಸರನ್ನು ಪ್ರಕಟಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಪ್ರಣಬ್ ಮುಖರ್ಜಿ ಅವರನ್ನು ಅಭಿನಂದಿಸಿದ್ದಾರೆ.
ಭೂಪೇನ್ ಹಝಾರಿಕಾ ಅವರು ಗಾಯಕ,ಸಾಹಿತಿ , ಸಂಗೀತ ನಿರ್ದೇಶಕ ಮತ್ತು ಸಿನಿ ಸಾಹಿತ್ಯವನ್ನು ಬರೆದು ಪ್ರಖ್ಯಾತಿಯ ಉತ್ತುಂಗಕ್ಕೇರಿದವರು. 1926 ರಲ್ಲಿ ಜನಿಸಿದ್ದ ಅವರು ತನ್ನ 85 ನೇ ವಯಸ್ಸಿನಲ್ಲಿ 2011 ರಲ್ಲಿ ಇಹಲೋಕ ತ್ಯಜಿಸಿದ್ದರು. ಸಿನಿ ಕ್ಷೇತ್ರ ಮಾತ್ರವಲ್ಲದೆ ಬಿಜೆಪಿಯಲ್ಲೂ ಗುರುತಿಸಿಕೊಂಡಿದ್ದರು.
ಚಂದಿಕಾದಾಸ್ ಅಮೃತರಾವ್ ದೇಶ್ಮುಖ್ ಅವರು ಸಾಮಾಜಿಕ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿದವರು. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಕೇತ್ರದಲ್ಲಿ ಸೇವೆ ಸಲ್ಲಿಸಿದವರು.