ಬೆಳ್ಳಾರೆ, ಜು 26 (DaijiworldNews/SM): ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿರುವ ಘಟನೆ ಜುಲೈ ೨೬ರ ಮಂಗಳವಾರ ರಾತ್ರಿ ವೇಳೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವೀಣ್ ಸಂಜೆ ತನ್ನ ಕೋಳಿ ಅಂಗಡಿ ಬಂದ್ ಮಾಡಿ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಪ್ರವೀಣ್ ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದರು. ಮತ್ತೊಂದೆಡೆ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರೀಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ಯಾವ ಕಾರಣಕ್ಕೆ ಹೆಲ್ಲೆ ನಡೆದಿದೆ ಎನ್ನುವುದು ಇನ್ನಷ್ಟೇ ತಿಳಿಯಬೇಕಾಗಿದೆ.
ಇನ್ನು ವಾರದ ಹಿಂದೆಯಷ್ಟೇ ಬೆಳ್ಳಾರೆಯಲ್ಲಿ ಮುಸ್ಲಿಂ ಯುವಕನೊಬ್ಬನನ್ನು ಕೊಲೆ ಮಾಡಲಾಗಿತ್ತು.