ಪುತ್ತೂರು, ಜು 27 (DaijiworldNews/MS): ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್( ೩೦) ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಸಂಬಂಧ ಪುತ್ತೂರು ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಭೇಟಿ ನೀಡಿದ್ದಾರೆ.
ದುಷ್ಕರ್ಮಿ ದಾಳಿ ಬಳಿಕ ಪ್ರವೀಣ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು. ಈ ವೇಳೆ ಪುತ್ತೂರು ಆಸ್ಪತ್ರೆಗೆ ಮುಂದೆ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಆಗಮಿಸುವಂತೆ ಪಟ್ಟುಹಿಡಿದರು. ಈ ಹಿನ್ನಲೆಯಲ್ಲಿ ಪುತ್ತೂರಿಗೆ ಆಗಮಿಸಿದ ಜಿಲ್ಲಾಧಿಕಾರಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದು, ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡುವ ಕೋರಿಕೆಯನ್ನು ಪ್ರಾಮಾಣಿಕವಾಗಿ ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದ್ದಾರೆ.
ಪೊಲೀಸರು ಸೂಕ್ತ ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಿದ್ದು, ಹಾಗೂ ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಪೊಲೀಸ್ ವರದಿ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.