ಪುತ್ತೂರು, ಜು 27 (DaijiworldNews/HR): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದ್ದು, 144 ಸೆಕ್ಷನ್ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ಆಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ನೆಟ್ಟಾರುವಿನಲ್ಲಿ ಪ್ರವೀಣ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಇನ್ನು ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ರಸ್ತೆಯುದ್ದಕ್ಕೂ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.