ಪುತ್ತೂರು,ಜು 27 (DaijiworldNews/HR): ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪಡೆದು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2022ರಂತೆ 302 ಜೊತೆಗೆ 34 ಐಪಿಸಿ ಅನ್ವಯ ಕೇಸು ದಾಖಲಿಸಿಕೊಳ್ಳಲಾಗಿದ್ದು, ಇದೀಗ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕೆಯ್ಯೂರು ಮಾಡಾವು ಸಂತೋಷ್ ನಗರದ ಮಧು ಕುಮಾರ್ ರಾಯನ್ (34ವ) ನೀಡಿದ ದೂರಿನಂತೆ ಗಾಡಿಯಲ್ಲಿ ಬಂದು ಹತ್ಯೆ ಮಾಡಿರುವ ಮೂರು ಜನ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೇಸು ದಾಖಲಾಗಿದೆ.
ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಬರ್ಬರವಾಗಿ ಹತ್ಯೆ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಸಾವನ್ನಪ್ಪಿದ್ದು, ಇದೀಗ ಶಂಕಿತ ಬೆಳ್ಳಾರೆ ಮೂಲದ ಐವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.