ಬೆಳ್ಳಾರೆ, ಜು 27 (DaijiworldNews/HR): ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಅಂತಿಮ ದರ್ಶನದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಸ್ಥಳದಲ್ಲಿ ಲಾಠಿಚಾರ್ಜ್ ಮಾಡಿದ್ದಾರೆ.
ಲಾಠಿಚಾರ್ಜ್ ವೇಳೆ ಕೆಲವು ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇನ್ನು ಸದ್ಯ ಬೆಳ್ಳಾರೆ ಪೇಟೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಹೆಚ್ಚಿಸಿದ್ದಾರೆ.