ಪುತ್ತೂರು, ಜು 27 (DaijiworldNews/DB): ಸುಳ್ಯದ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಖಡಕ್ ಐಪಿಎಸ್ ಅಧಿಕಾರಿ ಎಡಿಜಿಪಿ ಅಲೋಕ್ಕುಮಾರ್ ಇಂದು ಸುಳ್ಯಕ್ಕೆ ಆಗಮಿಸಲಿದ್ದು, ಎರಡು ದಿನ ಸುಳ್ಯದಲ್ಲೇ ಮೊಕ್ಕಾಂ ಹೂಡಲಿದ್ದಾರೆ.
ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೊನಾವಣೆ ಅವರಿಂದ ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಸದ್ಯ ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಭಾಗದ ಎಡಿಜಿಪಿ ಅಲೋಕ್ಕುಮಾರ್ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ.
ಬಳಿಕ ಸುಳ್ಯಕ್ಕೆ ಆಗಮಿಸಿ ಎರಡು ದಿನ ಇಲ್ಲೇ ಮೊಕ್ಕಾಂ ಹೂಡಲಿದ್ದಾರೆ.