ಸುಳ್ಯ, ಜು 28 (DaijiworldNews/DB): ದುಷ್ಕರ್ಮಿಗಳಿಂದ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆಯ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಪುತ್ರ ಶೋಕದಲ್ಲಿರುವ ಪ್ರವೀಣ್ ತಂದೆ ಶೇಖರ ಪೂಜಾರಿ ಅವರ ಹೃದಯ ಬಡಿತದಲ್ಲಿ ಏರುಪೇರುಂಟಾಗಿದೆ. ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.