ಹೊಸದಿಲ್ಲಿ, ಜ276(SS): ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಲು ಪ್ರಿಯಾಂಕ ಗಾಂಧಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕ ಗಾಂಧಿ ರಾಜಕೀಯ ಜೀವನಕ್ಕೆ ಪ್ರವೇಶಿಸುತ್ತಿದ್ದು, ಪಕ್ಷದ ಕಾರ್ಯದರ್ಶಿ ಹುದ್ದೆ ಅಲಂಕರಿಸಲಿದ್ದಾರೆ. ಫೆ. 4ರಂದು ಪ್ರಿಯಾಂಕ ಗಾಂಧಿ ಲಖ್ನೋದಲ್ಲಿ ರಾಹುಲ್ ಗಾಂಧಿ ಜತೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ನಂತರ ಮೌನಿ ಅಮವಾಸ್ಯೆಯ ಸಂದರ್ಭದ ಎರಡನೇ ಶಾಹಿ ಸ್ನಾನದಲ್ಲಿ ಪಾಲ್ಗೊಳ್ಳುವರು ಎಂದು ಮೂಲಗಳು ತಿಳಿಸಿದೆ.
ಆ ಸಂದರ್ಭದಲ್ಲಿ ಪವಿತ್ರ ಕುಂಭ ಸ್ನಾನ ಸಾಧ್ಯವಾಗದಿದ್ದರೆ, ನಂತರ ವಸಂತ ಪಂಚಮಿಯ ಫೆ. 10ರಂದು ಮೂರನೇ ಶಾಹಿ ಸ್ನಾನದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯೂ ಇದೆ. ಅದಾದ ಬಳಿಕ ಪ್ರಿಯಾಂಕ ಸಕ್ರೀಯ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎನ್ನಲಾಗಿದೆ. ಪ್ರಿಯಾಂಕ ರಾಜಕೀಯ ಪ್ರವೇಶ ಕಾಂಗ್ರೆಸ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ.