ಸುರತ್ಕಲ್,ಜು 28 (DaijiworldNews/SM): ನಗರ ಹೊರ ವಲಯದಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ತನಕ ನಿಖರ ಕಾರಣ ಗೊತ್ತಾಗಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕೊಲೆಯಾದ ಸುರತ್ಕಲ್ ಪ್ರದೇಶಕ್ಕೆ ಭೇಟಿ ನೀಡಿದ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಪ್ರೇಮಪ್ರಕರಣಕ್ಕೆ ಸಂಬಂಧಿಸಿ ಕೊಲೆ ನಡೆಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿಯ ತನಕ ಅಂತಹ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ಸುಕಾಸುಮ್ಮನೆ ವಿಚಾರಗಳನ್ನು ಹಂಚಿಕೊಳ್ಳದೆ, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಶಾಂತಿಕದಡುವ ಘಟನೆಗಳಿಗೆ ಆಸ್ಪದ ನೀಡದೆ ಶಾಂತಿಯಿಂದಿರಲು ಮನವಿ ಮಾಡಲಾಗಿದೆ. ಅಲ್ಲದೆ, ಬಿಗುಬಂದೋಬಸ್ತ್ ಎರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.