ಮಂಗಳೂರು, ಜು 28 (DaijiworldNews/MS): ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ಜು.29 ರಂದು ರಜೆ ಘೋಷಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸುರತ್ಕಲ್ ನಲ್ಲಿ ನಡೆದಿರುವ ಫಾಝಿಲ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸುತ್ತಮುತ್ತದ ಪರಿಸರ ಉದ್ವಿಗ್ನತೆಯಿಂದ ಕೂಡಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ, ಶಾಲಾ ಮಕ್ಕಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ಹಿನ್ನಲೆ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸುವ ಸಾಧ್ಯತೆ ಇದೆ.
ಇನ್ನು ಸುರತ್ಕಲ್, ಮುಲ್ಕಿ, ಪಣಂಬೂರು ಮತ್ತು ಬಜಪೆ ಠಾಣಾ ವ್ಯಾಪ್ತಿಗಳಲ್ಲಿಈಗಾಗಲೇ ಶನಿವಾರದವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.