ಮಂಗಳೂರು, ಜು 29 (DaijiworldNews/MS): ಮಂಗಳೂರು, ಜು 29 (DaijiworldNews/MS): ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದ್ದರೂ , ಜಿಲ್ಲೆಗೆ ಪ್ರವೇಶಕ್ಕೆ ಯತ್ನಿಸುತ್ತಿದ್ದ ಮುತಾಲಿಕ್ ಅವರನ್ನು ಹೆಜಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿ ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಆದೇಶಿಸಿದ್ದರು.
ಇದೀಗ ಪಾಝಿಲ್ ಹತ್ಯೆಯ ಬಳಿಕ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲೂ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆಗಸ್ಟ್ 3 ರವರೆಗೆ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ತೆರಳಲು ಬರುತ್ತಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ