ಮಂಗಳೂರು, ಜು 29 (DaijiworldNews/MS): ಮಹತ್ವದ ಬೆಳವಣಿಗೆಯಲ್ಲಿ ಬೆಳ್ಳಾರೆ, ಸುಬ್ರಮಣ್ಯ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಇಬ್ಬರೂ ಕೂಡಲೇ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಬಿಡುಗಡೆಗೊಂಡು, ಯಾವುದೇ ಸೇರುವಿಕೆ ಕಾಲವನ್ನು ಬಳಸಿಕೊಳ್ಳದೆ, ಶೀಘ್ರದಲ್ಲಿ ನಿಯೋಜಿತ ಸ್ಥಳದಲ್ಲಿ ವರದಿ ಮಾಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶ ಹೊರಡಿಸಿದ್ದಾರೆ.
ಆದರೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಿಎಸ್ಐ ವರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿಲ್ಲ.