ಬೆಳ್ಳಾರೆ ಜು 29 (DaijiworldNews/HR): ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ಪ್ರವೀಣ್ ಅವರ ಕುಟುಂಬವನ್ನು ಭೇಟಿ ಮಾಡಿದ್ದು, ಅವರು ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಇನ್ಮುಂದೆ ಇಂತಹ ಸಾವು ಮರುಕಳಿಸದಂತೆ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ ಎಂದರು.
ಇನ್ನು ಯುವ ಮೋರ್ಚಾದ ವತಿಯಿಂದ 15 ಲಕ್ಷ ರೂ. ನೀಡುತ್ತದೆ. ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ. ಪಕ್ಷ 25 ಲಕ್ಷ ರೂ. ನೀಡಿದೆ ಎಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಿಟ್ಟು ಕಾಂಗ್ರೆಸ್, ಜೆಡಿಎಸ್ಗೆ ಲಾಭವಾಗುತ್ತೆ ಎಂದು ಕೆಕೇ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರ ರೋಷದಿಂದ ನಮಗೆ ನಷ್ಟವಾಗಲ್ಲ. ನಮ್ಮ ಕಾರ್ಯಕರ್ತರು ಸಿದ್ಧಾಂತ ಬಿಡೋದಿಲ್ಲ ಎಂದು ಹೇಳಿದ್ದಾರೆ.