ಕುಂದಾಪುರ, ಜು 29 (DaijiworldNews/DB): ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಬಸ್ರೂರು ಮೂರು ಕೈ ಸಮೀಪದ ಹುಣ್ಸಿಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕುಂದಾಪುರದಿಂದ ಬಸ್ರೂರು ಮಾರ್ಗವಾಗಿ ಚಲಿಸುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ಕಾರು ಗದ್ದೆಯಲ್ಲಿ ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಂದಾಪುರ ಸಂಚಾರಿ ಠಾಣೆಯಲ್ಲಿ ಇನ್ನು ಪ್ರಕರಣ ದಾಖಲಾಗಬೇಕಾಗಿದೆ.