ಪಡುಬಿದ್ರಿ, ಜು 29 (DaijiworldNews/SM): ಪ್ರವೀಣ್ ನೆಟ್ಟಾರು ಮನೆಗೆ ನಾನು ಹೊರಟಿದ್ದೆ. ಹೆಜಮಾಡಿಯಲ್ಲಿ ನನ್ನನ್ನ ಪೊಲೀಸರು ತಡೆದಿದ್ದಾರೆ. ದಕ್ಷಿಣ ಕನ್ನಡ ಡಿಸಿ ಕೊಟ್ಟ ನಿಷೇದಾಜ್ಞೆ ಪತ್ರವನ್ನು ಕೈ ಕೊಟ್ಟಿದ್ದಾರೆ. ಆದರೆ, ನೀವು ಮುತಾಲಿಕ್ ನ ಬ್ಯಾನ್ ಮಾಡುತ್ತಿಲ್ಲ ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಿಂದು ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದಾರೆ ಒಪ್ಪಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಿದ್ದಾರೆ ನೀಚ ನಿರ್ಲಜ್ಜರಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ ಸಾಂತ್ವನ ಹೇಳಲು ಹೋಗುತ್ತಿದ್ದೇನೆ. ನನ್ನನ್ನು ನೀವು ಬ್ಯಾನ್ ಮಾಡಿದ್ದು ನೀವು ಮಾಡಿದ್ದಂತಹ ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ. ಹಿಂದೂ ರಾಷ್ಟ್ರಕ್ಕಾಗಿ ಹಿಂದುತ್ವಕ್ಕಾಗಿ ಎಂದು ಕಾರ್ಯಕರ್ತರು ಚುನಾವಣೆಗೆ ನಿಲ್ಲುತ್ತಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಧಿಕ್ಕರಿಸುತ್ತಾರೆ ನೋಡುತ್ತಿರಿ. ಹಿಂದುತ್ವ ವಿಚಾರದಲ್ಲಿ ನಾನು ಒಂದಿಂಚು ಕಾಂಪ್ರಮೈಸ್ ಮಾಡುವನಲ್ಲ. ಬೆಳ್ಳಾರೆಗೆ ಹೋಗಲು ಎಲ್ಲರಿಗೂ ಅವಕಾಶವಿದೆ ನನಗೆ ಯಾಕಿಲ್ಲ? ಎಂದು ಉಡುಪಿಯ ಪಡುಬಿದ್ರೆಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.