ಮಂಗಳೂರು, ಜು 30 (DaijiworldNews/MS): ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವು ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿವೆ.
ಹೀಗಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಜು.30 ರ ಶನಿವಾರ ರಜೆ ಘೋಷಣೆ ಮಾಡಿದ್ದಾರೆ.
ಇಂದು ಮುಂಜಾನೆಯೇ ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದರು.
ಇನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮನವಿಯಂತೆ ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ತಿಳಿಸಿದ್ದಾರೆ