ಮಂಗಳೂರು/ ಉಡುಪಿ: ಜು 30 (DaijiworldNews/MS): ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಸ್ತುತ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆಮಾತ್ರವಲ್ಲದೆ ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅನೇಕ ನಿರ್ಬಂಧಗಳನ್ನು ಹೇರಿವೆ.
ಇನ್ನೊಂದೆಡೆ ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಹಾಗೂ ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಪೊಲೀಸರು ತಪಾಸಣೆ ಆರಂಭಿಸಿದ್ದಾರೆ. ತಲಪಾಡಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಉಳ್ಳಾಲ, ಕೆಎಸ್ಆರ್ಪಿ ಮತ್ತು ಸಂಚಾರಿ ಪೊಲೀಸರು ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ ೧೧ ಕಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದುಮ್ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಯುತ್ತಿದೆ. ಹೆಜಮಾಡಿ , ಸಾಸ್ತಾನ , ಶಿರೂರು , ಟೋಲ್ ಗೇಟ್ ಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಅತಿ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.