ಮಂಗಳೂರು, ಜು 30(DaijiworldNews/HR): ಪುತ್ರಿಯ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ(2) (ಪೋಕ್ಸೊ ನ್ಯಾಯಾಲಯ) 10 ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಬಂಟ್ವಾಳ ತಾಲೂಕಿನ ಇಸ್ಮಾಯಿಲ್ (47) ಎಂದು ಗುರುತಿಸಲಾಗಿದೆ.
ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ 2019ರಲ್ಲಿ ಪೋಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 20,000 ರೂ. ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಮತ್ತೆ 1 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.