ಸುಳ್ಯ, ಜು 30(DaijiworldNews/HR): ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಅವರು ಇಂದು ಭೇಟಿ ನೀಡಿದ್ದು, ಮನೆಯವರಿಗೆ ಸಾಂತ್ವನ ತಿಳಿಸಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಘಟನೆಗಳನ್ನು ಗಮನಿಸಿ ನಮ್ಮದೇ ಸರಕಾರ ಸ್ವಲ್ಪ ದಿಟ್ಟ ಹೆಜ್ಜೆಯನ್ನಿಡಬೇಕಿತ್ತು. ಅದಕ್ಕೆ ಬೇಕಾದ ವ್ಯವಸ್ಥೆ ಮಾಡುವಲ್ಲಿ ನಾವು ಹಿಂದೆ ಬಿದ್ದಿದನ್ನು ನಾವು ಒಪ್ಪಿಕೊಳ್ಳುತ್ತೇವೆ. ಇಂತಹ ಕೃತ್ಯ ತಡೆಗೆ ವಿಶೇಷ ಕಟ್ಟೆಚ್ಚರ ವಹಿಸಬೇಕಿದೆ ಎಂದರು.
ಇನ್ನು ಬಿಜೆಪಿ ಸರಕಾರ ಬಂದ್ರೆ ನಮಗೆಲ್ಲ ರಕ್ಷಣೆ ಸಿಗುತ್ತದೆ ಎಂಬ ಕಾರ್ಯಕರ್ತರ ಭಾವನೆಯಿತ್ತು, ಆದರೆ ಅದರಲ್ಲಿ ಸ್ವಲ್ಪ ಕೊರತೆಯಾಗಿದೆ ಎಂಬ ಭಾವನೆಯಿದೆ ಎಂದಿದ್ದಾರೆ.