ಮಂಗಳೂರು, ಜು 31 (DaijiworldNews/DB): ಸುರತ್ಕಲ್ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ಕುಮಾರ್ ಅವರನ್ನು ನೇಮಿಸಲಾಗಿದೆ.
ಮೃತ ವ್ಯಕ್ತಿಯ ಸಂಬಂಧಿಕರು ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳಿಂದ ನಡೆಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ಮತ್ತು ಪರಿಣಾಮಕಾರಿ ತನಿಖೆ ಕೈಗೊಳ್ಳುವ ನಿಟ್ಟಿನಲ್ಲಿ ಮಹೇಶ್ಕುಮಾರ್ ಅವರನ್ನು ತನಿಖೆಗೆ ನೇಮಕ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ತನಿಖೆಯ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಇದೇ ವೇಳೆ ಮಹೇಶ್ಕುಮಾರ್ ಅವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೂಚಿಸಿದ್ದಾರೆ.
ಫಾಝಿಲ್ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಪ್ಪ ತನಿಖೆ ನಡೆಸುತ್ತಿದ್ದರು.