ಮಣಿಪಾಲ, ಜು 31 (DaijiworldNews/SM): ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ತಮ್ಮಂದಿರಾದ ಡಾಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪೈ ಕುಟುಂಬದ ಎಲ್ಲ ಸದಸ್ಯರು, ಭಾವ ಡಾಬಾಲಕೃಷ್ಣ ಪೈ ಮೊದಲಾದವರು ಜತೆಯಲ್ಲಿದ್ದು ಆರೈಕೆಯಲ್ಲಿ ತೊಡಗಿದ್ದರು.
ಆಧುನಿಕ ಮಣಿಪಾಲದ ಶಿಲ್ಪಿಿ ಡಾಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾಟಿಎಂಎ ಪೈ ಪ್ರತಿಷ್ಠಾಾನ, ಡಾಟಿಎಂಎ ಪೈಯವರು ಸ್ಥಾಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್, ಸಿಂಡಿಕೇಟ್ ಬ್ಯಾಾಂಕ್ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು. 1933ರ ಜೂ. 20ರಂದು ಜನಿಸಿದ ಮೋಹನದಾಸ್ ಪೈಯವರು ಡಾಟಿಎಂಎ ಪೈಯವರ ಹಿರಿಯ ಪುತ್ರ. ಇವರಿಗೆ ಮೂರು ವರ್ಷ ಆಗಿರುವಾಗ ತಂದೆಯವರು ಉಡುಪಿಯಿಂದ ಮಣಿಪಾಲಕ್ಕೆ ಸ್ಥಳಾಂತರವಾದ ಕಾರಣ ಇವರೂ ಮಣಿಪಾಲದಲ್ಲಿ ಬೆಳೆದರು.
ತಂದೆಯವರು ಆರಂಭಿಸಿದ ಹೊಸ ಶಾಲೆಯಲ್ಲಿ (ಮಣಿಪಾಲ ಅಕಾಡೆಮಿ ಶಾಲೆ), ಉಡುಪಿಯ ಮೋಡರ್ನ್ ಶಾಲೆಯಲ್ಲಿ ಪ್ರಾಾಥಮಿಕ ಶಿಕ್ಷಣವನ್ನು, ಉಡುಪಿಯ ಬೋರ್ಡ್ ಹೈಸ್ಕೂಲ್ನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಬಳಿಕ ತಂದೆಯವರು ನೂತನವಾಗಿ ಆರಂಭಿಸಿದ ಎಂಜಿಎಂ ಕಾಲೇಜಿನಲ್ಲಿ (1949-51) ಇಂಟರ್ಮೀಡಿಯೆಟ್ ಶಿಕ್ಷಣ ಪಡೆದರು. ಎಂಜಿಎಂ ಕಾಲೇಜಿನ ಮೊದಲ ತಂಡದ ವಿದ್ಯಾಾರ್ಥಿ ಇವರು. ಕೊಲಾಪುರದಲ್ಲಿ ಕಾನೂನು ಶಿಕ್ಷಣ ಪಡೆದ (1951-53) ಮೋಹನದಾಸ್ ಪೈಯವರು ಪುಣೆ ವಿ.ವಿ.ಯಲ್ಲಿ ಪ್ರಥಮ ರ್ಯಾಾಂಕ್ ಗಳಿಸಿದ್ದರು. ಆಗ ಕಾನೂನು ಪದವಿ ಅಧ್ಯಯನ ನಡೆಸಲು ಇಲ್ಲಿ ಅವಕಾಶವಿರಲಿಲ್ಲ. ಕರಾವಳಿ ಪ್ರದೇಶ ಮದ್ರಾಾಸ್ ಪ್ರಾಂತ್ಯಕ್ಕೆ ಸೇರಿದ ಕಾರಣ ಒಂದೋ ಮದ್ರಾಸ್ಗೆ ತೆರಳಬೇಕಿತ್ತು. ಇಲ್ಲವಾದರೆ ಮುಂಬಯಿ ಪ್ರಾಾಂತ್ಯಕ್ಕೆ ಹೋಗಬೇಕಿತ್ತು. ಕರಾವಳಿಯವರಿಗೆ ಮದ್ರಸ್ಗಿಂತ ಮುಂಬಯಿ ಪ್ರಾಂತ್ಯ ಹೆಚ್ಚು ಪರಿಚಿತವಾಗಿದ್ದರಿಂದ ಅವರು ಮುಂಬಯಿ ಪ್ರಾಾಂತ್ಯದ ಕೊಲ್ಹಾಾಪುರಕ್ಕೆ ಹೋದರು.
ವೃತ್ತಿ ಪ್ರವೇಶ
ಶಿಕ್ಷಣದ ಬಳಿಕ ತಂದೆಯವರು ಆರಂಭಿಸಿದ ಸಂಸ್ಥೆೆಗಳಲ್ಲಿ ತೊಡಗಿದರು. ಅವರು ಮೊದಲಾಗಿ ಪ್ರವೇಶಿಸಿದ್ದು ಮಣಿಪಾಲದಲ್ಲಿ ಹೆಂಚಿನ ಕಾರ್ಖಾನೆ ನಡೆಸುತ್ತಿಿದ್ದ ಕೆನರಾ ಲ್ಯಾಾಂಡ್ ಇನ್ವೆಸ್ಟ್ಮೆಂಟ್ಸ್ನ ಜನರಲ್ ಮೆನೇಜರ್ ಆಗಿ. ಇದರ ಜತೆ ಮಣಿಪಾಲ್ ಪವರ್ ಪ್ರೆಸ್ನ ಆಡಳಿತ ಪಾಲುದಾರರಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡರು.
ಪೈಯವರು ಆಡಳಿತ ಮತ್ತು ಹಣಕಾಸು ಯೋಜನೆಯ ಜವಾಬ್ದಾಾರಿಯನ್ನು ನೋಡಿಕೊಂಡಿದ್ದರೆ ಟಿ.ಸತೀಶ್ ಪೈಯವರು ಉತ್ಪಾದನೆಯ ಜವಾಬ್ದಾರಿಯನ್ನು ನೋಡಿಕೊಂಡಿರುತ್ತಿದ್ದರು. ಹೊಸ ರೀತಿ ಆಟೋಮೆಟಿಕ್ ಟೈಪ್ಸೆಟ್ಟಿಂಗ್ ಮೆಶಿನ್ ಮತ್ತು ಮುದ್ರಣ ಯಂತ್ರವನ್ನು ಗುಣಮಟ್ಟದ ಮುದ್ರಣಕ್ಕಾಾಗಿ ಹೊರದೇಶದಿಂದ ತರಿಸಲಾಯಿತು. 1961ರಲ್ಲಿ ಪುಸ್ತಕದ ಗುಣಮಟ್ಟದ ಮುದ್ರಣಕ್ಕಾಗಿ ಪ್ರೆಸ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರ ಬಳಿಕ ಹಲವು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಮಣಿಪಾಲ್ ಪ್ರೆಸ್ಗೆ ಬಂದವು. ಅತ್ಯಾಾಧುನಿಕ ಆಫ್ಸೆಟ್ ಮೆಶಿನ್, ಫೋಟೋ ಕಂಪೋಸಿಂಗ್ನೊಂದಿಗೆ ಮುದ್ರಣ ಕ್ಷೇತ್ರದಲ್ಲಿ ದಾಪುಗಾಲು ಇರಿಸಿರುವುದರಲ್ಲಿ ಮೋಹನದಾಸ್ ಪೈಯವರ ಅಪಾರ ಕೊಡುಗೆ ಇದೆ. ಈ ಮೂಲಕ ಮಣಿಪಾಲ ಪ್ರೆಸ್ ದೇಶಮಟ್ಟದ ಮಾನ್ಯತೆಯನ್ನು ಪಡೆಯಿತು. ಮೈಸೂರು, ಕರ್ನಾಟಕ ವಿ.ವಿ.ಗಳ ಮತ್ತು ವಿವಿಧ ಪ್ರಕಾಶನ ಸಂಸ್ಥೆಗಳ ಪಠ್ಯ, ಪುಸ್ತಕಗಳನ್ನು ಮುದ್ರಿಸಿದ ಕೀರ್ತಿಯು ಈಗಲೂ ಮುನ್ನಡೆಯುತ್ತಿದೆ.
1970ರಲ್ಲಿ ಪೈಯವರ ಮುಂದಾಳತ್ವದಲ್ಲಿ ‘ಉದಯವಾಣಿ’ ದಿನ ಪತ್ರಿಿಕೆ ಆರಂಭವಾಗಿ ಅಲ್ಪಾಾವಧಿಯಲ್ಲಿಯೇ ಜನಪ್ರಿಯಗೊಂಡಿತು. ಮೋಹನದಾಸ್ ಪೈಯವರು ಆಡಳಿತ ನಿರ್ದೇಶಕರಾಗಿ, ಸತೀಶ್ ಪೈಯವರು ಜಂಟಿ ಆಡಳಿತ ನಿರ್ದೇಶಕರಾಗಿರುವ ಮಣಿಪಾಲ್ ಪ್ರಿಂಟರ್ಸ್ ಆ್ಯಂಡ್ ಪಬ್ಲಿಷರ್ಸ್ ಲಿ.ನಿಂದ ಉದಯವಾಣಿ ಆರಂಭಗೊಂಡಿತು. ವೆಬ್ ಆಫ್ಸೆಟ್ ಯಂತ್ರದಿಂದ ಮುದ್ರಣ ಕಾರ್ಯ ಆರಂಭಮಾಡಿದ ಅತಿ ಹಿರಿಯ ದಿನ ಪತ್ರಿಕೆಗಳಲ್ಲಿ ಉದಯವಾಣಿಯೂ ಒಂದು. ಪೈಯವರ ಸಮರ್ಥ ನಾಯಕತ್ವದಲ್ಲಿ ‘ಉದಯವಾಣಿ’ಯು ಗುಣಮಟ್ಟದ ಮುದ್ರಣಕ್ಕಾಾಗಿ ಹಲವು ವರ್ಷ ನಿರಂತರವಾಗಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿತು.
ತರಂಗ ಶಕೆ
1983ರಲ್ಲಿ ಆರಂಭಗೊಂಡ ‘ತರಂಗ’ ವಾರಪತ್ರಿಕೆಯೂ ಮೋಹನದಾಸ್ ಪೈಯವರ ಕನಸಿನ ಕೂಸು. ಮುಖಪುಟ ಮತ್ತು ಒಳಪುಟಗಳನ್ನು ಕಲರ್ನಲ್ಲಿ ಮುದ್ರಿಸಲು ಬೇಕಾದ ಅಲ್ಟ್ರಾ ಮೋಡರ್ನ್ ವೆಬ್ ಆಫ್ಸೆಟ್ ಯಂತ್ರವನ್ನು ಸ್ಥಾಪಿಸಲಾಯಿತು.