ಮಂಗಳೂರು, ಆ 01 (DaijiworldNews/HR): ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಪ್ರವೀಣ್ ನೆಟ್ಟಾರು ಕುಟುಂಬಸ್ಥರ ಸಂಕಷ್ಟ ಆಲಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ವೇಳೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಕುಟುಂಬದ ಕಷ್ಟಕ್ಕೆ ನೆರವಾಗುತ್ತೇವೆ. ಯಾವುದೇ ಸಮಸ್ಯೆ, ಸಂಕಷ್ಟಗಳು ಬಂದರು ನನಗೆ ಕರೆ ಮಾಡಿ ಎಂದು ಧೈರ್ಯ ತುಂಬಿದ್ದು, ಹಂತಕರನ್ನು ಶೀಘ್ರವೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಕುಮಾರಸ್ವಾಮಿ ಭೇಟಿ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ಸೇರಿದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.