ಸುಳ್ಯ, ಆ 01(DaijiworldNews/MS): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೂ ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಕೆಲ ದಿನಗಳ ಹಿಂದೆ ಹತ್ಯೆಯಾದ ಮಸೂದ್ ಮನೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಮೃತ ಮಸೂದ್ ಕುಟುಂಬದ ದುಃಖ ಆಲಿಸಿ ಅವರು ಈ ವೇಳೆ ಕುಟುಂಬದವರಿಗೆ ಸಾಂತ್ವನ ಹೇಳಿದ ಕುಮಾರಸ್ವಾಮಿ ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ನೀಡಿದರು.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕರಾವಳಿ ಜಿಲ್ಲೆಯಲ್ಲಿ ನಡೆದಿರುವ ಸಾಲು ಸಾಲು ಹತ್ಯೆ ಪ್ರಕರಣ ಜನರನ್ನು ಆತಂಕಕ್ಕೀಡು ಮಾಡಿದೆ. ಹಂತಕರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರಿ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮತ್ತೆಂದೂ ಮರುಕಳಿಸಬಾರದು .ತೀವ್ರ ಶೋಕದಲ್ಲಿರುವ ಕುಟುಂಬದವರು ಈ ನೋವಿನಿಂದ ಹೊರಬರಬೇಕು. ಪಕ್ಷದ ವತಿಯಿಂದ ಆ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಎಂ.ಫಾರೂಕ್, ಶ್ರೀ ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.