ಮಂಗಳೂರು, ಆ 01 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದ್ದು, ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಜಿಪಿ ಪ್ರವೀಣ್ ಸೂದ್, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧಿಸಿದ್ದು, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದರು.
ಇನ್ನು ಫಾಝಿಲ್ ಹತ್ಯೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಪತ್ತೆಯಾಗಿದೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.