ಉಡುಪಿ, ಆ 01(DaijiworldNews/SM): ಬೆಳ್ಳಾರೆಯಲ್ಲಿ ಪ್ರವೀಣ್ ನನ್ನು ಹತ್ಯೆ ಮಾಡಲಾಗಿದೆ. ಆದರೆ, ಮಸೂದ್ ನ ಕೊಲೆಯಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಆಗಿದೆ ಎಂದು ಸಚಿವ ಎಸ್. ಅಂಗಾರ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿಯವರು, ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿದ್ದಾರೆ. ಆದರೆ, ಅಲ್ಲೇ ಮಸೂದ್ ಮನೆಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅಂಗಾರ, ನಾವು ತಾರತಮ್ಯ ಮಾಡಿಲ್ಲ. ಪ್ರವೀಣ್ ನೆಟ್ಟಾರು ಕೊಲೆಯಾಗಿದೆ. ಮಸೂದ್ ವಿಚಾರದಲ್ಲಿ ಗಾಂಜದ ಪ್ರಕರಣ ಇದೆ. ಅಲ್ಲಿ ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡಲಾಗಿದೆ. ಅದು ಈ ರೀತಿಯ ಮರ್ಡರ್ ಅಲ್ಲ ಎಂದು ಗೊಂದಲದ ಹೇಳಿಕೆ ನೀದಿದ್ದಾರೆ. ಮುಸ್ಲಿಂ ಕ್ರಿಶ್ಚಿಯನ್ ಹಿಂದೂ ಭೇದ ಭಾವ ನಮಗೆ ಇಲ್ಲ ಎಂದಿದ್ದಾರೆ.
ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರ ಬಂಧನವಾಗಿದೆ. ಮತ್ತಿಬ್ಬರನ್ನು ಪತ್ತೆ ಹಚ್ಚುವ ಕೆಲಸ ಇಲಾಖೆ ಮಾಡುತ್ತಿದೆ. ಘಟನೆಯ ಬಳಿಕ ಸರಕಾರ ಕ್ಷಿಪ್ರವಾಗಿ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.