ಮಂಗಳೂರು, ಆ 02(DaijiworldNews/MS): ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿರುವವರ ಮೇಲೆ ಮಂಗಳೂರು ಪೊಲೀಸರು ತೀವ್ರ ನಿಗಾ ಇಟ್ಟಿದ್ದು , ಮತ್ತೆ 12 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಪೋಸ್ಟ್ ಗೆ ಸಂಬಂಧಿಸಿ ಈ ಹಿಂದೆ ೫ ಪ್ರಕರಣ ದಾಖಲಿಸಲಾಗಿತ್ತು.
ಇದೀಗ ಮತ್ತೆ 12 ಪ್ರಕರಣಗಳನ್ನು ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ದಾಖಲಾದ ಪ್ರಕರಣಗಳ ಬಗ್ಗೆ ತನಿಖೆ ಮುಂದುವರಿದಿದ್ದು, ಇನ್ನೂ ನಿಗಾ ಇರಿಸಲಾಗಿದೆ. ಈ ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿದ್ದಾರೆ.