ಮಂಗಳೂರು, ಆ 03 (DaijiworldNews/DB): ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಆಗಸ್ಟ್ 5ರವರೆಗೆ ಮುಂದುವರಿಸಲಾಗಿದೆ.
ಆಗಸ್ಟ್ 3 ರಿಂದ 5ರ ಬೆಳಗ್ಗೆ 9 ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು ಹಾಗೂ ಸಾಗಾಣಿಕೆಯನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಈ ಆದೇಶ ನೀಡಲಾಗಿದೆ.
ಜಿಲ್ಲೆಯಾದ್ಯಂತ ಆ. 6ರವರೆಗೆ ನಿಷೇದಾಜ್ಞೆ ಜಾರಿಯಲ್ಲಿದೆ. ಮದ್ಯ ಮಾರಾಟಕ್ಕೂ ಕಳೆದ ಕೆಲವು ದಿನಗಳಿಂದ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ಆಗಸ್ಟ್ 5ರವರೆಗೆ ವಿಸ್ತರಿಸಲಾಗಿದೆ.