ಮಂಗಳೂರು, ,ಆ 04 (DaijiworldNews/MS): ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿದ್ದೇವೆ ಎಂದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ದ.ಕ, ಉಡುಪಿ ಜಿಲ್ಲಾ ಪೊಲೀಸ್ ಹಾಗೂ ನಗರ ಕಮಿಷನರ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಪ್ರಮುಖವಾಗಿ ಮೂವರನ್ನು ವಿಚಾರಣೆ ಮಾಡಲಾಗುತ್ತಿದೆ.. ಈ ನಡುವೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಚರ್ಚೆ ಕೂಡಾ ನಡೆಯುತ್ತಿದೆ. ಶೀಘ್ರವೇ ಅವರ ಬಂಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶರತ್ ಮಡಿವಾಳ ಹತ್ಯೆ, ದೀಪಕ್ ರಾವ್ ಹತ್ಯೆ, ಪಿಂಕಿ ನವಾಜ್ ಹತ್ಯೆಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪ್ರಸ್ತುತ ಹೇಗಿದ್ದಾರೆ?ಎಲ್ಲಿದ್ದಾರೆ ? ಅವರ ಮೇಲೆ ಪ್ರಿವೆಂಟಿವ್ ಆಗಿ ರೌಡಿ ಶೀಟ್ ತೆರೆಯುವ ಕೆಲಸ ಆಗಿದೆಯಾ, ಕೇಸಿನ ವಿಚಾರಣೆ ಹೇಗೆ ನಡೆಯುತ್ತಿದೆ ಎಲ್ಲವನ್ನು ಪರಿಶೀಲನೆ ನಡೆಸುವಂತೆ ಹಾಗೂ ಪಿಂ ಕಿನವಾಜ್ ಹತ್ಯೆಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುವುದು ಗೊತ್ತಾಗಿದ್ದು, ಈ ರೀತಿಯ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.